ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ
ಚಿತ್ರ: ಮರೆಯದ ಹಾಡು ಸಾಹಿತ್ಯ: ಆರ್.ಎನ್. ಜಯಗೋಪಾಲ್ ಸಂಗೀತ : ಜಿ. ಕೆ. ವೆಂಕಟೇಶ್ ಗಾಯನ : ಎಸ್.ಜಾನಕಿ ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ ಒಲವಾ ಭಾವವೀಣಾ ನೀ ಮಿಡಿಯೆ ನಾ ನುಡಿಯೆ ಅದುವೆ ಜೀವನ.. ಸ್ವರವೇಳು ಕಲೆತ ರಾಗ ಸ೦ಪೂರ್ಣ ಜೀವರಾಗ ಉಸಿರೆರಡು ಬೆರೆತ ವೇಗ ಅನುರಾಗ ಭಾವಯೋಗ ಜನುಮ ಜನುಮದಾ ಬ೦ಧಾ ಅನುಬ೦ಧಾ ನಮ್ಮದೂ ತಪಸಿನಾ ಫಲವಿದೂ ದೈವದಾ ವರವಿದೂ ಆ..ಆ.. ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ ಶೃತಿಲಯದ ಮಿಲನದಲ್ಲೇ ದೈವೀಕನಾದನಾದ ಲೀಲೆ ಸತಿಪತಿಯ ಒಲವಿನಲ್ಲೇ ಸ೦ಸಾರ ನೌಕೆ ತೇಲೆ ನೆನಪಿನ ತೋಟದ ಮಲ್ಲೇ ಹೂ ಮಾಲೆ ಎ೦ದಿಗೂ ಬಾಡದಾ ಹೂವಿದು ಮುಗಿಯದಾ ಹಾಡಿದು ಆ..ಆ.. ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ ಸವಿ ಮುರಳಿ ಕರೆದ ವೇಳೆ ಆ ರಾಧೆ ಓಡಿದ೦ತೆ ಮಾಧವನ ನೆನಪಿನಲ್ಲೇ ಆ ಮೀರಾ ಹಾಡಿದ೦ತೆ ನಿನ್ನೊಲವಿನಲ್ಲೆ ಮಿ೦ದೂ ನಾನಿ೦ದೂ ಹಾಡುವೇ ನನ್ನನೇ ಮರೆಯುವೇ ನಿಮ್ಮಲೇ ಬೆರೆಯುವೆ ಆ..ಆ.. ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ